×
Ad

ನ.20ರಂದು ಸಹಕಾರಿ ಸಪ್ತಾಹ ಸಮಾರೋಪ

Update: 2020-11-18 19:01 IST

ಉಡುಪಿ, ನ.18: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದಿರುವ ಅಖಿಲ ಭಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ ನ.20ರಂದು ಅಪರಾಹ್ನ 2:30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ.

ಉಡುಪಿ ಶಾಸಕ ಕೆ. ರಘುಪತಿ ಟ್ ಸಮಾರೋಪ ಸಮಾರಂಭವನ್ನು ಉದ್ಘಾಟಿಸಲಿದ್ದು, ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದ ಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News