ವರವರ ರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಬಾಂಬೆ ಹೈಕೋರ್ಟ್ ಅನುಮತಿ

Update: 2020-11-18 14:07 GMT

ಮುಂಬೈ, ನ. 18: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ ತೆಲುಗು ಲೇಖಕ ಹಾಗೂ ಕವಿ ವರವರ ರಾವ್ ಅವರಿಗೆ ಮುಂಬೈಯ ನಾನಾವತಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆ ನೀಡುವಂತೆ ಕೋರಿದ ಮನವಿಗೆ ಬಾಂಬೆ ಉಚ್ಚ ನ್ಯಾಯಾಲಯ ಬುಧವಾರ ಅನುಮೋದನೆ ನೀಡಿದೆ.

 ತಲೋಜಾ ಕೇಂದ್ರ ಕಾರಾಗೃಹದಲ್ಲಿರುವ ವರವರ ರಾವ್ ಅವರನ್ನು ನಗರದ ಪಶ್ಚಿಮ ಉಪ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ಕೂಡಲೇ ವರ್ಗಾಯಿಸುವಂತೆ, ಅವರ ಚಿಕಿತ್ಸೆಯ ವೆಚ್ಚ ಭರಿಸುವಂತೆ ಹಾಗೂ ದೂರುದಾರೆ ವರವರ ರಾವ್ ಅವರ ಪತ್ನಿ ಪಿ. ಹೇಮಲತಾ ಸಹಿತ ಕುಟುಂಬದ ಸದಸ್ಯರಿಗೆ ಆಸ್ಪತ್ರೆಯ ಶಿಷ್ಟಾಚಾರದಂತೆ ರಾವ್ ಅವರನ್ನು ಭೇಟಿಯಾಗಲು ಅವಕಾಶ ಕಲ್ಪಿಸುವಂತೆ ನ್ಯಾಯಾಲಯ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಆಸ್ಪತ್ರೆಯಿಂದ ಬಿಡುಗಡೆ ಮಾಡದಂತೆ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಹಾಗೂ ಮಾಧವ್ ಜಾಮ್ದಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಹೇಳಿದೆ. 80 ವರ್ಷದ ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ವರ್ಗಾಯಿಸುವಂತೆ ಕೋರಿ ಅವರ ಪತ್ನಿ ಪಿ. ಹೇಮಲತಾ ಅವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News