×
Ad

​ಕ್ರೆಡಿಟ್ ಕಾರ್ಡ್ ನಂಬರ್ ಪಡೆದು ವಂಚನೆ

Update: 2020-11-18 19:48 IST

ಮಂಗಳೂರು, ನ.18: ಎಸ್‌ಬಿಐ ಮತ್ತು ಬ್ಯಾಂಕ್ ಆಫ್ ಬರೋಡಾದ ಇಬ್ಬರು ಗ್ರಾಹಕರಿಗೆ ಕರೆ ಮಾಡಿದ ಅಪರಿಚಿತರು ಕ್ರೆಡಿಟ್ ಕಾರ್ಡ್ ನಂಬರ್ ಪಡೆದು ಹಣವನ್ನು ವಂಚಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.17ರಂದು ಸಂಜೆ 5:44ಕ್ಕೆ ಎಸ್‌ಬಿಐ ಗ್ರಾಹಕರೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಎಸ್‌ಬಿಐ ಕ್ರೆಡಿಟ್ ಕಾರ್ಡ್ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಕ್ರೆಡಿಟ್ ಕಾರ್ಡ್ ರಿಆಕ್ಟಿವೇಟ್ ಮಾಡುವುದಾಗಿ ತಿಳಿಸಿ ಕ್ರೆಡಿಟ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬ್ರ ಪಡೆದಿ ದ್ದಾರೆ. ಅಲ್ಲದೆ ಒಟಿಪಿ ನಂಬ್ರ ಪಡೆದು 80,000 ರೂ.ವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ನ.17ರಂದು ಪೂ.11ಕ್ಕೆ ಬ್ಯಾಂಕ್ ಆಫ್ ಬರೋಡಾದ ಗ್ರಾಹಕರೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಡೆಬಿಟ್ ಕಾರ್ಡನ್ನು ವಿಜಯಾ ಬ್ಯಾಂಕ್‌ನಿಂದ ಬ್ಯಾಂಕ್ ಆಫ್ ಬರೋಡಾಕ್ಕೆ ವರ್ಗಾವಣೆ ಮಾಡುವುದಾಗಿ ತಿಳಿಸಿ ಡೆಬಿಟ್ ಕಾರ್ಡ್ ನಂಬ್ರವನ್ನು ಪಡೆದು 73,182 ರೂ.ವನ್ನು ಹಂತ ಹಂತವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.

ಎರಡೂ ಪ್ರಕರಣ ದಾಖಲಿಸಿರುವ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News