ನ. 20: ‘ಯಕ್ಷಗಾನ ಮತ್ತು ಬ್ಯಾರಿ ಸಂಬಂಧ’ ಕುರಿತು ವಿಚಾರಸಂಕಿರಣ
Update: 2020-11-18 20:05 IST
ಮಂಗಳೂರು, ನ.18: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ನ.20ರಂದು ಸಂಜೆ 4ಕ್ಕೆ ಬಪ್ಪಬ್ಯಾರಿ ಯಕ್ಷಗಾನ ಮತ್ತು ಬ್ಯಾರಿ ಸಂಬಂಧ ಕುರಿತ ವಿಚಾರ ಸಂಕಿರಣವು ತುಳು ಸಾಹಿತ್ಯ ಅಕಾಡಮಿಯ ತುಳು ಭವನದಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬ್ಯಾರಿ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯನ್ನು ಬಿಡುಗಡೆಗೊಳಿಸುವರು. ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯಕ್ಷಗಾನ ಕಲಾವಿದರಾದ ಜಬ್ಬಾರ್ ಸಮೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಈ ಸಂದರ್ಭ ಗಿರೀಶ್ ರೈ ಕಕ್ಕೆಪದವು ಮತ್ತು ಬಳಗದಿಂದ ಬಪ್ಪಬ್ಯಾರಿ ಯಕ್ಷಗಾನ ನಡೆಯಲಿದೆ ಎಂದು ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.