×
Ad

ಎಸ್‍ಡಿಪಿಐ ಕಚೇರಿಗಳು ಸೇರಿ ಬೆಂಗಳೂರಿನ 43 ಕಡೆ ಎನ್‍ಐಎ ಪರಿಶೀಲನೆ

Update: 2020-11-18 21:40 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ವು ಬುಧವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ)ದ ಕಚೇರಿಗಳು ಸೇರಿದಂತೆ 43 ಕಡೆ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

ನಾಲ್ಕು ಎಸ್‍ಡಿಪಿಐ ಕಚೇರಿಗಳು ಸೇರಿದಂತೆ ನಗರದ ಒಟ್ಟು 43 ಕಡೆ ಎನ್‍ಐಎ ದಾಳಿ ನಡೆಸಿದೆ. ದಾಳಿ ವೇಳೆ ಕೆಲ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಆಗಸ್ಟ್ 12ರಂದು ನಡೆದ ಈ ಗಲಭೆಯಲ್ಲಿ ಸಾವು, ನೋವು ಸಂಭವಿಸಿದ್ದಲ್ಲದೆ, ಡಿಜೆ ಹಳ್ಳಿ ಪೊಲೀಸ್ ಠಾಣೆ ಹಾಗೂ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ಅಖಂಡ ಶ್ರೀನಿವಾಸಮೂರ್ತಿ ನಿವಾಸವು ಸುಟ್ಟು ಕರಕಲಾಗಿತ್ತು. ಗಲಭೆಯಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆಯಲ್ಲಿ 350ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News