ಸರಕಾರಿ ನೌಕರರ ಬಯೋಮೆಟ್ರಿಕ್ ಹಾಜರಾತಿ ಪದ್ಧತಿ ಮರು ಚಾಲನೆ

Update: 2020-11-18 17:18 GMT

ಬೆಂಗಳೂರು, ನ.18: ಕೊರೋನ ಸೋಂಕು ಅಧಿಕವಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ವಿನಾಯಿತಿ ನೀಡಲಾಗಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಮರು ಚಾಲನೆಗೊಳಿಸಲಾಗಿದೆ.

ಅಧಿಕಾರಿ ಹಾಗೂ ಸಿಬ್ಬಂದಿಗಳ ಆರೋಗ್ಯದ ದೃಷ್ಟಿಯಿಂದ ಬಯೋಮೆಟ್ರಿಕ್ ಬದಲಿಗೆ ಹಾಜರಾತಿ ಪುಸ್ತಕದಲ್ಲಿ ನಮೂದಿಸಲು ಅವಕಾಶ ಕಲ್ಪಿಸಿ, ಬಯೋಮೆಟ್ರಿಕ್‍ಗೆ ವಿನಾಯಿತಿ ನೀಡಲಾಗಿತ್ತು. ಇದೀಗ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಡಿಮೆಯಾಗುತ್ತಿದೆ. ಆದುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರಾರಂಭಿಸಲಾಗಿದೆ ಹಾಗೆಯೇ ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್ ಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News