ಮೈಕ್ರೋ ಸಾಲ ವೈಯುಕ್ತಿಕ ಯೋಜನೆಗೆ ಅರ್ಜಿ ಆಹ್ವಾನ

Update: 2020-11-18 17:19 GMT

ಬೆಂಗಳೂರು, ನ. 18: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಬೆಂಗಳೂರು ಉತ್ತರ ವಿಭಾಗದಿಂದ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೋವಿಡ್-19ರ ವಿಶೇಷ ಯೋಜನೆ ಮೈಕ್ರೋ ಸಾಲ ವೈಯಕ್ತಿಕ ಯೋಜನೆ (ಮಹಿಳೆಯರಿಗೆ ಮಾತ್ರ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಸ್ಲಿಮ್, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. kmdcmicro.karnataka.gov.in ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಡಿ.10 ರಂದು ಕೊನೆಯ ದಿನಾಂಕವಾಗಿದ್ದು, ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಗೆ ಡಿ.21 ರೊಳಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News