ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಡಿ.17 ರವರೆಗೆ ಅವಕಾಶ

Update: 2020-11-18 17:40 GMT

ಬೆಂಗಳೂರು, ನ.18: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ತಿದ್ದುಪಡಿಗಳಿಗಾಗಿ ಡಿ.17 ರವರೆಗೆ ಕಾಲಾವಕಾಶ ನೀಡಲಾಗಿದೆ.

ಚುನಾವಣಾ ಆಯೋಗದ ವೆಬ್‍ಸೈಟ್‍ನಲ್ಲಿ ಮತದಾರರ ಪಟ್ಟಿಯನ್ನು ಹಾಕಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ. ಹೆಸರು ಇಲ್ಲದವರು ಅಥವಾ ತಿದ್ದುಪಡಿ ಮಾಡಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನಮೂನೆ-6 ಸಲ್ಲಿಸಿ ಹೆಸರು ಸೇರಿಸಬಹುದು, ನಮೂನೆ-7 ನೀಡಿ ಪಟ್ಟಿಯಿಂದ ತೆಗೆದು ಹಾಕುವುದು ಹಾಗೂ ನಮೂನೆ-8 ಸಲ್ಲಿಸಿ ತಿದ್ದುಪಡಿಯನ್ನು ಮಾಡಿಕೊಳ್ಳಬಹುದಾಗಿದೆ ಹಾಗೂ ನಮೂನೆ-8ಎ ಮೂಲಕ ಮತಗಟ್ಟೆಯ ವ್ಯಾಪ್ತಿಯಿಂದ ಮತ್ತೊಂದು ಮತಗಟ್ಟೆಗೆ ಹೆಸರು ವರ್ಗಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News