ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಸ್ಫೋಟ: ನಾಲ್ವರು ಮೃತ್ಯು
Update: 2020-11-19 14:39 IST
ಮಾಲ್ಡಾ: ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಗುರುವಾರ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದರೆ, ಇತರ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯು ಸುಜಾಪುರ್ ಪ್ರದೇಶದಲ್ಲಿ ಬೆಳಗ್ಗೆ 11ರ ಸುಮಾರಿಗೆ ಸಂಭವಿಸಿದೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಅವಶೇಷದಡಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.