×
Ad

​ದೇಶಕ್ಕೆ ಇಂದಿರಾ ಗಾಂಧಿ ಕೊಡುಗೆ ಅವಿಸ್ಮರಣೀಯ: ಹರೀಶ್ ಕುಮಾರ್

Update: 2020-11-19 15:06 IST

ಮಂಗಳೂರು, ನ.19: ಇಪ್ಪತ್ತು ಅಂಶ ಕಾರ್ಯಕ್ರಮ, ಪಡಿತರ ಚೀಟಿ ಯೋಜನೆ, ಭೂ ಸುಧಾರಣೆ ಕಾಯ್ದೆ, ಅಂಗನವಾಡಿ ಯೋಜನೆ, ಬ್ಯಾಂಕ್ ರಾಷ್ಟ್ರೀಕರಣ, ರಾಜಧನ ರದ್ದತಿ, ಬಡವರಿಗೆ ಉಚಿತ ಮನೆ ನಿರ್ಮಾಣ, ಋಣ ಪರಿಹಾರ ಕಾಯ್ದೆ, ಮಹಿಳಾ ಸಬಲೀಕರಣ, ಮುಂತಾದ ಕ್ರಾಂತಿಕಾರಿ ಯೋಜನೆಗಳ ಮೂಲಕ ಉಕ್ಕಿನ ಮಹಿಳೆ ಎಂದೆನಿಸಿಕೊಂಡಿರುವ ಮಾಜಿ ಪ್ರಧಾನಿ ದೀ ಇಂದಿರಾ ಗಾಂಧಿಯವರು ದೇಶಕ್ಕೆ ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಭಿಪ್ರಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಇಂದು ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 103ನೇ ಜನ್ಮದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮನಪಾ ವಿರೋಧ ಪಕ್ಷ ನಾಯಕ ಅಬ್ದುಲ್ ರವೂಫ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಶಶಿಧರ್ ಹೆಗ್ಡೆ, ಸುರೇಂದ್ರ ಕಂಬಳಿ, ಭಾಸ್ಕರ್ ಕೆ., ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News