×
Ad

ಇಂದಿರಾಗಾಂಧಿ ಜನ್ಮದಿನಾಚರಣೆ: ವೃದ್ಧಾಶ್ರಮಕ್ಕೆ ಗ್ರೈಂಡರ್ ಕೊಡುಗೆ

Update: 2020-11-19 17:29 IST

ಉಡುಪಿ, ನ.19: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯ ಕ್ರಮ ವನ್ನು ಗುರುವಾರ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಳಿನಿ ಆಚಾರ್ಯ ಮಾತನಾಡಿ, ಇಂದಿರಾ ಗಾಂಧಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ದು, ಬಲಿಷ್ಟಗೊಳಿಸಿದ ಧೀಮಂತ ಮಹಿಳೆ. ಈ ಮೂಲಕ ಇವರು ಭಾರತದ ಕೀರ್ತಿಯನ್ನು ವಿಶ್ವಕ್ಕೆ ಪಸರಿಸಿದರು ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಮಾತನಾಡಿ, ದೇಶದಲ್ಲಿ ಮೊದಲ ಬಾರಿ 20 ಅಂಶಗಳ ಕಾರ್ಯಕ್ರಮದ ಮೂಲಕ ದೇಶದ ಸಮಾನತೆಗೆ ಶ್ರಮಿಸಿದ ಇಂದಿರಾ ಅವರ ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸಬೇಕಾ ಗಿದೆ. ತನ್ನ ದಿಟ್ಟತನದಿಂದ ಮಹಾನ್ ನಾಯಕಿ ಯಾದ ಇಂದಿರಾ ಗಾಂಧಿ ಅವರ ಆದರ್ಶಗಳು ಕಾಂಗ್ರೆಸ್ ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕಟಪಾಡಿಯ ಕಾರುಣ್ಯ ವ್ರದ್ಧಾಶ್ರಮಕ್ಕೆ ಗ್ರೈಂಡರ್‌ನ್ನು ಕೊಡುಗೆಯಾಗಿ ನೀಡಲಾಯಿತು. ಮಾಜಿ ನಗರಸಭಾ ಉಪಾಧ್ಯಕ್ಷ ಕುಶಲ ಶೆಟ್ಟಿ, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ನಗರಸಭಾ ಸದಸ್ಯ ರಮೇಶ್ ಕಾಂಚನ್, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಸಂಯೋಜಕಿ ರೋಶನಿ ಒಲಿವೇರ್, ಆಗ್ನೆಸ್ ಡೆಸಾ, ಜ್ಯೋತಿ ಪುತ್ರನ್, ಪ್ರಭಾಕರ ಆಚಾರ್ಯ, ಸಂಧ್ಯಾ ಶೆಟ್ಟಿ, ಪ್ರಭಾ ಕಿಶೋರ್, ಉದ್ಯಾವರ ನಾಗೇಶ್ ಕುಮಾರ್, ಅಮೃತಾ ಅಲೆವೂರು, ಪುಷ್ಪಾಅಂಚನ್, ಚಂದ್ರಾವತಿ ಭಂಡಾರಿ, ಮೀನಾ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News