×
Ad

ಕಾಲೇಜು ವಿದ್ಯಾರ್ಥಿಗಳಿಗೆ ಡಿ.10ರವರೆಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ

Update: 2020-11-19 19:18 IST

ಉಡುಪಿ, ನ.19: ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನ.17ರಿಂದ ಪ್ರಾರಂಭಿಸಲಾಗಿದ್ದು, 2019-20ನೇ ಸಾಲಿನಲ್ಲಿ ವಿತರಿಸಲಾಗಿ ರುವ ಪದವಿ/ ಸ್ನಾತಕೋತ್ತರ / ಡಿಪ್ಲೋಮ/ ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್‌ಪಾಸುಗಳನ್ನು ಡಿಸೆಂಬರ್ 10ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಬಗ್ಗೆ ಈ ವರ್ಷದ ವರ್ಷದ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಕರಾವಳಿ ಜಿಲ್ಲೆಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News