ಬೆಂಗಳೂರು: 57 ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢ

Update: 2020-11-19 15:53 GMT

ಬೆಂಗಳೂರು, ನ.19: ನಗರದ 57 ಮಂದಿ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಆಯುಕ್ತ ಮಂಜನಾಥ್ ಪ್ರಸಾದ್ ತಿಳಿಸಿದ್ದಾರೆ.

2020-21ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭದ ಹಿನ್ನೆಲೆ ನಗರದಲ್ಲಿ 11 ಸಾವಿರ ಮಂದಿ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 7,753 ಮಂದಿಯ ವರದಿ ಬಂದಿದೆ. ಇದರಲ್ಲಿ 57 ಮಂದಿ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ಧೃಡವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನ ಸೋಂಕು ಹಿನ್ನೆಲೆ ವಿದ್ಯಾರ್ಥಿಗಳಿಗೆ ಈ ಹಿಂದೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿತ್ತು. ಈಗ ನ.17ರಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿಗಳು ಪ್ರಾರಂಭ ಮಾಡಲಾಗಿತ್ತು. ಕಾಲೇಜು ಪ್ರಾರಂಭವಾದ ಮೂರು ದಿನದೊಳಗೆ 57 ಮಂದಿ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟಿರುವುದು ಪೋಷಕರಲ್ಲಿ ಹಾಗೂ ಉಪನ್ಯಾಸಕರಲ್ಲಿ ಆತಂಕವನ್ನು ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News