ಮರಗಳನ್ನು ಕಡಿಯಲು ಅನುಮತಿ ನೀಡಿರುವ ವಿವರಗಳನ್ನು ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿ: ಹೈಕೋರ್ಟ್

Update: 2020-11-19 18:06 GMT

ಬೆಂಗಳೂರು, ನ.19: ಮರಗಳನ್ನು ಕಡಿಯಲು ಅಥವಾ ಸ್ಥಳಾಂತರಿಸಲು ನೀಡಿದ ಅನುಮತಿಯ ವಿವರಗಳನ್ನು ತನ್ನ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳನ್ನು ಜಾರಿಗೆ ಕೋರಿ ದತ್ತಾತ್ರೇಯ ಟಿ. ದೇವರೆ ಮತ್ತು ಬೆಂಗಳೂರು ಪರಿಸರ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಮರಗಳನ್ನು ಕಡಿಯಲು ಅನುಮತಿ ನೀಡಿದ ತಕ್ಷಣವೇ ಈ ವಿವರಗಳನ್ನು ಬಿಬಿಎಂಪಿ ಅಧಿಕಾರಿಗಳು ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಸೂಚನೆ ನೀಡಿತು.

ಬಿಎಂಆರ್‍ಸಿಎಲ್ ಪರ ವಾದಿಸಿದ ವಕೀಲರು, ಮೆಟ್ರೋ ಯೋಜನೆ ಜಾರಿ ವಿಳಂಬ ಆಗುತ್ತಿರುವುದರಿಂದ ದಿನಕ್ಕೆ 85 ಲಕ್ಷ, ತಿಂಗಳಿಗೆ ಸುಮಾರು 20 ಕೋಟಿ ರೂ.ನಷ್ಟವುಂಟಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ನ.23ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News