ಆನ್‍ಲೈನ್ ಗೇಮ್‍ಗಳ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಬೊಮ್ಮಾಯಿ

Update: 2020-11-20 12:00 GMT

ಬೆಂಗಳೂರು, ನ.20: ಕಾನೂನುಬಾಹಿರವಾಗಿ ನಡೆಯುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ನಿಷೇಧಿಸಲು ಹೊಸ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಬೇರೆ ರಾಜ್ಯಗಳಲ್ಲೂ ಈ ರೀತಿ ಕಾನೂನು ಜಾರಿಯಲ್ಲಿದ್ದು, ಅದರ ಬಗ್ಗೆ ಅಧ್ಯಯನ ಮಾಡಿ ಹೊಸ ಕಾನೂನು ಅನುಷ್ಠಾನಗೊಳಿಸುತ್ತೇವೆ. ಅಲ್ಲದೆ, ಯುವಕರು ಆನ್‍ಲೈನ್ ಗೇಮ್‍ಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿವೆ ಎಂದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ಅವರು 10 ಕೋಟಿ ರೂ. ದಂಡ ಪಾವತಿ ಮಾಡಿದ್ದಾರೆ. ಕಾರಾಗೃಹ ಅಧಿಕಾರಿಗಳು ನಿಯಮಾವಳಿಗಳ ಅನುಸಾರ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News