×
Ad

ಉಡುಪಿ: ಶುಕ್ರವಾರ 18 ಮಂದಿಗೆ ಕೊರೋನ ಸೋಂಕು ದೃಢ

Update: 2020-11-20 18:52 IST

ಉಡುಪಿ, ನ.20: ಜಿಲ್ಲೆಯಲ್ಲಿ ಶುಕ್ರವಾರ 18 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ 15 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, ಸದ್ಯ ಜಿಲ್ಲೆಯಲ್ಲಿ 211 ಮಂದಿ ಕೊರೋನಕ್ಕೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 11 ಮಂದಿ ಪುರುಷರು ಹಾಗೂ 7 ಮಂದಿ ಮಹಿಳೆಯರು. ಇವರಲ್ಲಿ 7 ಮಂದಿ ಪುರುಷರು ಹಾಗೂ ಮೂವರು ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 10, ಕುಂದಾಪುರ ತಾಲೂಕಿನ 4, ಕಾರ್ಕಳ ತಾಲೂಕಿನ ಇಬ್ಬರು ಹಾಗೂ ಹೊರ ಜಿಲ್ಲೆ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

15 ಮಂದಿ ಗುಣಮುಖ: ಗುರುವಾರ 15 ಮಂದಿ ಚಿಕಿತ್ಸೆ ಬಳಿಕ ಸೋಂಕಿ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,073 ಆಗಿದೆ. ಜಿಲ್ಲೆಯಲ್ಲಿ ಸದ್ಯ 211 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದಾರೆ ಎಂದರು.

2164 ನೆಗೆಟಿವ್: ಜಿಲ್ಲೆಯಲ್ಲಿ ಗುರುವಾರ ಒಟ್ಟು 2184 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2164 ಮಂದಿ ನೆಗೆಟಿವ್ ಬಂದಿದ್ದಾರೆ. 20 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,470 ಆಗಿದೆ.

ಗುರುವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ ಈಗ 2,21,371 ಆಗಿದೆ. ಇವರಲ್ಲಿ 1,98,901 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಈವರೆಗೆ ಒಟ್ಟು 22,470 ಮಂದಿ ಪಾಸಿಟಿವ್ ಬಂದಿದ್ದರೆ, ಇವರಲ್ಲಿ 22,073 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News