×
Ad

ಆಯ್ಕೆಗೆ ಬಂದ ಪುಸ್ತಕಗಳ ಪ್ರದರ್ಶನ

Update: 2020-11-20 18:56 IST

ಉಡುಪಿ, ನ.20: 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟ ಗೊಂಡ ಮತ್ತು 2020ರಲ್ಲಿ ಪ್ರಥಮ ಮುದ್ರಣಗೊಂಡ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಆಯ್ಕೆಗಾಗಿ ಮಂಡಿಸಲಾಗಿದೆ. ಅಲ್ಲದೇ ಆಯ್ಕೆ ಸಮಿತಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಆಯ್ಕೆಯಾದ ಹಾಗೂ ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ನ.24ರಿಂದ 26ರವರೆಗೆ ಗ್ರಂಥಾಂಗಣ, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಮುಂದೆ ಆಯ್ಕೆಗಾಗಿ ಪುಸ್ತಕ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆ ಗಳಿದ್ದಲ್ಲಿ ನ.30ರೊಳಗೆ ಒಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು ಇಲ್ಲಿಗೆ ಲಿಖಿತ ರೂಪದಲ್ಲಿ ಮನವಿಗಳನ್ನು ಸಲ್ಲಿಸಬಹುದು ಎಂದು ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News