×
Ad

ಮಂಗಳೂರು: ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Update: 2020-11-20 20:03 IST

ಮಂಗಳೂರು, ನ.20: ಇಲ್ಲಿನ ವ್ಯಕ್ತಿಯೊಬ್ಬರು ಅನಾಮಧೇಯ ಲಿಂಕ್‌ವೊಂದನ್ನು ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ.

ವ್ಯಕ್ತಿಯು ತನ್ನ ತಾಯಿಯ ಹೆಸರಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಖಾತೆಯಿಂದ ಹಣವನ್ನು ತನ್ನ ಹೆಸರಿನಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಹಣವು ವರ್ಗಾವಣೆಯಾಗದೆ ತಾಂತ್ರಿಕ ದೋಷ ಕಂಡುಬಂದಿದೆ. ಇದಾದ ಬಳಿಕ ವ್ಯಕ್ತಿಯ ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್‌ವೊಂದು ಬಂದಿದೆ. ಲಿಂಕ್‌ನ್ನು ಒತ್ತಿದಾಗ ಅವರ ಸಿಂಡಿಕೇಟ್ ಬ್ಯಾಂಕ್ ಖಾತೆಯಿಂದ 1,51,000 ರೂ. ಹಂತ ಹಂತವಾಗಿ ಕಡಿತಗೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News