ಮುಂಬೈ: ಡಿ.31ರವರೆಗೆ ಶಾಲೆ ಆರಂಭವಿಲ್ಲ

Update: 2020-11-20 15:19 GMT

ಮುಂಬೈ: ಮುಂಬೈಯಲ್ಲಿ ಬೃಹನ್ಮುಂಬಯಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ಡಿಸೆಂಬರ್ 31ರವರೆಗೆ ಮುಚ್ಚುವಂತೆ ಬಿಎಂಸಿ ಸೂಚಿಸಿದೆ. ನವೆಂಬರ್ 23ರಿಂದ ಶಾಲೆ ಆರಂಭವಾಗಲಿದೆ ಎಂದು ಈ ಮೊದಲು ಪ್ರಕಟಿಸಲಾಗಿತ್ತು. ದಿಲ್ಲಿಯಲ್ಲಿ ಕೊರೋನ ಸೋಂಕು ಪ್ರಕರಣ ಮತ್ತೆ ದಿಢೀರೆಂದು ಉಲ್ಬಣಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ, ಕುಟುಂಬ ಸದಸ್ಯರ ಮತ್ತು ಇತರರ ಸುರಕ್ಷತೆಯ ದೃಷ್ಟಿಯಿಂದ ಈ ವರ್ಷಾಂತ್ಯದವರೆಗೂ ಶಾಲೆಯನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ನವೆಂಬರ್ 23ರಿಂದ 9ನೇ ತರಗತಿಯಿಂದ 12ನೇ ತರಗತಿವರೆಗಿನ ಕ್ಲಾಸುಗಳನ್ನು ಆರಂಭಿಸಬಹುದು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಅಂತಿಮ ನಿರ್ಧಾರಕ್ಕೆ ಬರಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಶಾಲೆಗಳು ಆರಂಭವಾಗದಿದ್ದರೂ ಆನ್‌ಲೈನ್ ತರಗತಿಗಳು ಮುಂದುವರಿಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಸಚಿವೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News