×
Ad

ಉಡುಪಿ: ಏಳು ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್

Update: 2020-11-20 21:31 IST

ಉಡುಪಿ, ನ.20: ಅಂತಿಮ ವರ್ಷದ ತರಗತಿಗಳನ್ನು ನಡೆಸಲು ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳಿಗೆ ಸರಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಕೊರೋನ ಪರೀಕ್ಷೆಗಳಲ್ಲಿ ಉಡುಪಿ ಜಿಲ್ಲೆಯ 7 ಮಂದಿ ವಿದ್ಯಾರ್ಥಿಗಳು ಇದುವರೆಗೆ ಪಾಸಿಟಿವ್ ಬಂದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಏಳು ಮಂದಿ ವಿದ್ಯಾರ್ಥಿಗಳಲ್ಲಿ ನಾಲ್ವರು ಮಣಿಪಾಲ ಎಂಐಟಿಯ ವಿದ್ಯಾರ್ಥಿಗಳಾದರೆ, ಇಬ್ಬರು ಮಾಹೆ ಹಾಗೂ ಒಬ್ಬರು ಕಾರ್ಕಳದ ಕಾಲೇಜೊಂದರ ವಿದ್ಯಾರ್ಥಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 6000 ವಿದ್ಯಾರ್ಥಿಗಳು ಹಾಗೂ ಒಂದು ಸಾವಿರ ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು ಕೊರೋನ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ ಆರು ಸಾವಿರ ಮಂದಿಯ ಪರೀಕ್ಷಾ ವರದಿ ಬಂದಿದ್ದು, ಉಳಿದವರ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ. ಎಚ್ಚರಿಕೆಯ ಕ್ರಮವಾಗಿ ಎಲ್ಲರಿಗೂ ಆರ್‌ಟಿ ಪಿಸಿಆರ್ ಪರೀಕ್ಷೆಯನ್ನೇ ನಡೆಸಲಾಗುತ್ತಿದೆ ಎಂದು ಡಾ. ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News