ದೇಶದಲ್ಲಿ 90 ಲಕ್ಷ ದಾಟಿದ ಕೊರೋನ ಪ್ರಕರಣಗಳ ಸಂಖ್ಯೆ

Update: 2020-11-20 17:00 GMT

ಹೊಸದಿಲ್ಲಿ, ನ. 20: ಹೊಸ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಶುಕ್ರವಾರ 45,882 ದಾಖಲಾಗುವುದರೊಂದಿಗೆ ಭಾರತದಲ್ಲಿ ಕೊರೋನ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 90 ಲಕ್ಷ ದಾಟಿದೆ.

 ಕೊರೋನ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣದಲ್ಲಿ ಏರಿಕೆ ಹಾಗೂ ಸಾವಿನ ಪ್ರಮಾಣದಲ್ಲಿ ಇಳಿಕೆಯ ನಡುವೆಯೂ ದೇಶದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಗುರುವಾರಕ್ಕಿಂತ ಶುಕ್ರವಾರ ತುಸು ಏರಿಕೆಯಾಗಿದೆ. ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವಂತೆ ಕೇಂದ್ರ ಸರಕಾರ, ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉನ್ನತ ಮಟ್ಟದ ಬಹುಶಿಸ್ತಿನ ತಂಡಗಳನ್ನು ಕಳುಹಿಸಲು ಚಿಂತಿಸಲಾಗುತ್ತಿದೆ ಎಂದು ಹೇಳಿದೆ.

ಕೊರೋನ ಸೋಂಕಿನ ಹೊಸ ಪ್ರಕರಣಗಳು ಸೇರಿದಂತೆ ಭಾರತದ ಒಟ್ಟು ಕೊರೋನ ಸೋಂಕಿನ ಪ್ರಕರಣಗಳಲ್ಲಿ 4,43,794 ಅಂದರೆ, ಶೇ. 4.93 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,807 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 84,28,409ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News