ಜೂಜಾಟ ನಡೆಸುತ್ತಿದ್ದ ಆರೋಪ: 72 ಮಂದಿ ಬಂಧನ

Update: 2020-11-20 17:24 GMT

ಬೆಂಗಳೂರು, ನ.20: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ 72 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಗುರುವಾರ ತಡ ರಾತ್ರಿ ನಗರದ ಅರೇಬಿಕ್ ಕಾಲೇಜು ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಡೆಸುತ್ತಿದ್ದ ಕ್ಲಬ್‍ವೊಂದರ ಮೇಲೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು, ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಅಂದರ್ ಬಾಹರ್ ಆಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ. ಸದ್ಯ 72 ಮಂದಿಯನ್ನು ಬಂಧಿಸಿ ಇವರ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News