ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ಎನ್‌ಸಿಬಿ ದಾಳಿ, ವಿಚಾರಣೆ

Update: 2020-11-21 09:09 GMT

ಮುಂಬೈ: ಮಾದಕವಸ್ತು ನಿಯಂತ್ರಣ ಘಟಕ(ಎನ್‌ಸಿಬಿ)ಶನಿವಾರ ಕಾಮಿಡಿಯನ್ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಚಿಯಾ ಅವರ ಮನೆ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಸಮನ್ಸ್ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ಭಾರತಿ ಸಿಂಗ್ ಹಾಗೂ ಅವರ ಪತಿ ಡ್ರಗ್ಸ್ ಬಳಸುತ್ತಿದ್ದರೆಂಬ ಕುರಿತು ಶಂಕಿಸಲಾಗಿದೆ ಎಂದು ಸುದ್ದಿಸಂಸ್ಥೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಸುಶಾಂತ್ ಸಿಂಗ್ ರಜಪೂತ್  ಸಾವಿನ ತನಿಖೆ ಆರಂಭಿಸಿದ ಬಳಿಕ ಎನ್‌ಸಿಬಿ ಚಿತ್ರರಂಗದ ಹಲವು ನಟ-ನಟಿಯರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಅಕ್ರಮ ಡ್ರಗ್ಸ್ ಸೇವನೆಗೂ, ಚಿತ್ರೋದ್ಯಮಕ್ಕೂ ಸಂಬಂಧವಿದೆ ಎಂದು ಎನ್‌ಸಿಬಿ ಆರೋಪಿಸಿದೆ. ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟಂಬರ್ 8 ರಂದು ಬಾಲಿವುಡ್ ನಟಿ ರಿಯಾ ಚಕ್ರವರ್ತಿಯನ್ನು ಎನ್‌ಸಿಬಿ ಬಂಧಿಸಿತ್ತು. ದೀಪಿಕಾ ಪಡುಕೋಣೆ, ಶ್ರದ್ದಾ ಕಪೂರ್ ಹಾಗೂ ಸಾರಾ ಅಲಿ ಖಾನ್‌ರನ್ನು ಇದೇ ವಿಚಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News