ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ: ಮೀನುಗಾರರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

Update: 2020-11-21 10:11 GMT

ಉಡುಪಿ, ನ.21: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್‌ನಲ್ಲಿದ್ದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್‌ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಕಾರ್ಯಕ್ರಮದಲ್ಲಿ ವಿತರಿಸಿದರು.
  2018ರ ಡಿಸೆಂಬರ್ ತಿಂಗಳಲ್ಲಿ ಮಲ್ಪೆಬಂದರಿನಿಂದ ಮಾಲಕ ಸಹಿತ ಏಳು ಮೀನುಗಾರರಿದ್ದ ಸುವರ್ಣ ತ್ರಿಭುಜ ಬೋಟ್ ಮರಳಿ ಬಾರದೆ ನಾಪತ್ತೆಯಾಗಿತ್ತು. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಈ ಏಳು ಮೀನುಗಾರರ ನಿಗೂಢ ನಾಪತ್ತೆಯಿಂದ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ನೀಡುವಂತೆ ಶಾಸಕ ಕೆ.ರಘುಪತಿ ಭಟ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

ಇದೇ ಸಂದರ್ಭದಲ್ಲಿ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದರು. ಮೀನು ಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕ ಕುಮಾರ್ ಬಂಗಾರಪ್ಪ, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಿರ್ದೇಶಕ ರಾಮಾಚಾರ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News