ರಾಜ್ಯದಲ್ಲಿ ನ.25, 26ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ

Update: 2020-11-21 13:56 GMT

ಬೆಂಗಳೂರು, ನ.21: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಹಾಗೂ 26ರಂದು ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದ್ದು, ಇದೇ ವೇಳೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಹೆಚ್ಚು ಕಮ್ಮಿಯಾಗುತ್ತಿದೆ ಎಂದು ತಿಳಿಸಿದೆ.

ನ.25 ಮತ್ತು 26ರಂದು ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News