ಬೌರಿಂಗ್ ಆಸ್ಪತ್ರೆಯಲ್ಲಿ ನೂತನ ಮಹಾವಿದ್ಯಾಲಯಕ್ಕೆ ವಾಜಪೇಯಿ ಹೆಸರು ಮರುನಾಮಕರಣ

Update: 2020-11-22 14:22 GMT

ಬೆಂಗಳೂರು, ನ.22: ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹೆಸರನ್ನು ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ಮರುನಾಮಕರಣ ಮಾಡಿ ಆದೇಶಿಸಲಾಗಿದೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಎಂಬ ಹೆಸರಿನೊಂದಿಗೆ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಪ್ರಾರಂಭಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಬೆಂಗಳೂರು ನಗರದ ಶಿವಾಜಿನಗರದಲ್ಲಿ ಹೊಸದಾಗಿ 2018-19ರಿಂದ ಆರಂಭಿಸಲಾಗಿರುವ ಹೊಸ ಸರಕಾರಿ ಕಾಲೇಜಿನ ಹೆಸರನ್ನು ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ನಾಮಕರಣ ಮಾಡುವಂತೆ ನ.13ರಂದು ಸೂಚಿಸಿದ್ದರು. ಇದೀಗ ಸರಕಾರ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News