ಶಾಲೆಗಳ ಪುನಾರಂಭ ಕುರಿತು ನ.23ರಂದು ನಿರ್ಧಾರ ಸಾಧ್ಯತೆ

Update: 2020-11-22 11:39 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.22 : ರಾಜ್ಯದಲ್ಲಿ ಶಾಲೆಗಳನ್ನು ಎಂದಿನಿಂದ ಪುನಾರಂಭ ಮಾಡಬೇಕು ಎಂಬುದರ ಕುರಿತಾದ ಮಹತ್ವದ ನಿರ್ಧಾರವನ್ನು ನಾಳೆ(ನ.23) ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆ ಸಮ್ಮುಖದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಈ ಸಂಬಂಧ ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರು ಪಾಲ್ಗೊಳ್ಳಲಿದ್ದು, ಶಾಲೆ ಆರಂಭಿಸುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬಕುಮಾರ್ ಸಚಿವರಿಗೆ ನೀಡಿದ್ದಾರೆ. ಈ ವರದಿಯನ್ನು ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿ ಮುಂದಿಡುತ್ತಾರೆ. ವರದಿಯಲ್ಲಿ ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ನೀಡಿದ ಅಭಿಪ್ರಾಯಗಳಿವೆ. ಡಿಸೆಂಬರ್ ಎರಡನೇ ವಾರದಿಂದ ಎಸೆಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿ ಪ್ರಾರಂಭಿಸಬಹುದು ಎಂದು ಇದೇ ನವೆಂಬರ್ 9ರಂದು ಶಿಫಾರಸು ಮಾಡಿದ್ದು, ನಾಳೆ ಈ ಕುರಿತ ಅಂತಿಮ ಚಿತ್ರಣ ದೊರೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News