ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಮಹದೇವಪ್ಪ ಮೈಲಾರ ಹೆಸರಿಡಲು ಒಪ್ಪಿಗೆ

Update: 2020-11-22 11:54 GMT

ಹಾವೇರಿ, ನ. 22: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ 'ಮಹದೇವಪ್ಪ ಮೈಲಾರ’ ಅವರ ಹೆಸರಿಡಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಒಪ್ಪಿಗೆ ನೀಡಿದೆ.

ರಾಜ್ಯ ಸರಕಾರ 'ಮಹದೇವಪ್ಪ ಮೈಲಾರ’ ಹೆಸರು ಇಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಈ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಗೃಹ ಸಚಿವಾಲಯ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

1911ರಲ್ಲಿ ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಜನಿಸಿದ ಮಹದೇವಪ್ಪ ಮೈಲಾರ ಅವರು ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಿದ್ದರು. ಹದಿನಾರನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. 1930ರಲ್ಲಿ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ಉಪ್ಪಿನ ಸತ್ಯಾಗ್ರಹ ಆರಂಭಗೊಂಡಾಗ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿ ಮಹದೇವಪ್ಪ ಮೈಲಾರ ಅವರು ಭಾಗವಹಿಸಿ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News