ಅವಿಭಜಿತ ದ.ಕ. ಮೀನು ಮಾರಾಟ ಫೆಡರೇಷನ್‌ಗೆ ಪ್ರಶಸ್ತಿ

Update: 2020-11-22 12:01 GMT

ಉಡುಪಿ, ನ.22: ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ರಾಜ್ಯದ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News