ನಿಡಿಗಲ್ ಸೇತುವೆ ಲೋಕಾರ್ಪಣೆ

Update: 2020-11-22 13:42 GMT

ಬೆಳ್ತಂಗಡಿ: ಬೆಳ್ತಂಗಡಿ- ಚಾರ್ಮಾಡಿ ರಸ್ತೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿಡಿಗಲ್ ಸೇತುವೆ ನಿರ್ಮಾಣಗೊಂಡಿದ್ದು ಇದು ಅತಿ ಅಗತ್ಯ ಕಾಮಗಾರಿಯಾಗಿದ್ದು ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ದೊರೆತಂತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಅವರು ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾದ ನಿಡಿಗಲ್ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಡಿಮೆ ಅವಧಿಯಲ್ಲಿ  ಅತ್ಯಂತ ಗುಣಮಟ್ಟದದಲ್ಲಿ ಕಾಮಗಾರಿ ಪೂರ್ಣಗೊಂಡಿದೆ.  ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ದಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿದ್ದು ಗ್ರಾಮೀಣ ರಸ್ತೆಗಳೂ ಅಭಿವೃದ್ದೊಯಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಾಗೂ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಈ ಸಂದರ್ಭ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ಪ.ಪಂ. ಉಪಾಧ್ಯಕ್ಷ ಜಯಾನಂದ ಗೌಡ , ಶಶಿಧರ ಕಲ್ಮಂಜ, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News