ಸಿಬಿಐ ಮೂಲಕ ನನ್ನ ಶಕ್ತಿ ಕುಗ್ಗಿಸಲು ಬಿಜೆಪಿ ಪ್ರಯತ್ನ: ಡಿ.ಕೆ.ಶಿವಕುಮಾರ್ ಆರೋಪ

Update: 2020-11-22 14:11 GMT

ಬೆಂಗಳೂರು, ನ.22: ಸಿಬಿಐ ಬಿಜೆಪಿಯ ಕೆಲಸ ಮಾಡುತ್ತಿದೆ. ಬಿಜೆಪಿ ಸಿಬಿಐ ಮೂಲಕ ನನ್ನ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಯಾರು ಏನು ಬೇಕಾದರೂ ಮಾಡಲಿ ನಾನು ಪಕ್ಷ ಸಂಘಟನೆಯಲ್ಲಿ ತೊಡಗಿರುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಗೆ ಭವ್ಯ ಸ್ವಾಗತ ಕೋರಲಾಯಿತು. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅವರನ್ನು ಪಕ್ಷದ ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಕಾರ್ಯಕರ್ತರು ನಗರದಲ್ಲಿ ಬೈಕ್ ರ‍್ಯಾಲಿಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ ಮೂಲಕ ನನ್ನನ್ನು ಹಣಿಯುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ನಗರದ ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ರೋಟರಿ ವೃತ್ತದ ಮೂಲಕ ಹಾದು ಬಂದ ಅವರು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಪಟಾಕಿ ಸಿಡಿಸಿದರು. ರಂಗಮಂದಿರದೊಳಗೆ ಡಿ.ಕೆ. ಶಿವಕುಮಾರ್ ಬರುತ್ತಿದ್ದಂತೆ ಭಾರೀ ನೂಕು ನುಗ್ಗಲು ಉಂಟಾಯಿತು. ಶಿವಕುಮಾರ್ ಸೇರಿದಂತೆ ಇತರೆ ಮುಖಂಡರು ವೇದಿಕೆ ಮೇಲೆ ಬರಲು ಸಾಧ್ಯವಾಗಲಿಲ್ಲ. ಸುಮಾರು ಹದಿನೈದು ನಿಮಿಷಗಳ ನಂತರ ಅವರು ವೇದಿಕೆ ಏರಿದರು. ನೂಕು ನುಗ್ಗಲಿನ ನಡುವೆ ವಂದೇ ಮಾತರಂ ಗೀತೆ ಹಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News