×
Ad

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Update: 2020-11-22 19:44 IST

ಉಡುಪಿ, ನ.22: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರಿನ ವೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನ.30ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ ದೂರವಾಣಿ ಸಂಖ್ಯೆ: 0820-2573596 ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News