ಮಹಿಳೆಯರ, ಮಕ್ಕಳ ಅಭಿವೃದ್ಧಿಗೆ ಶ್ರಮಿಸಿ: ಶ್ಯಾಮಲಾ ಕುಂದರ್

Update: 2020-11-22 14:15 GMT

ಉಡುಪಿ, ನ.22: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಜೊತೆಯಾಗಿ ಶ್ರಮಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಸದ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.

ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜರಗಿದ ಮಕ್ಕಳ ದಿನಾಚರಣೆ ಕಾರ್ಯ ಕ್ರಮದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಮಾತ ನಾಡಿ, ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಅತೀ ಪ್ರಮುಖವಾಗಿದೆ. ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ ತಾಯಿಯೆೀ ಮೊದಲ ಗುರು ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ, ಮಕ್ಕಳ ಕಲ್ಯಾಣ ಸಮಿತಿಯಿಂದ ಮಕ್ಕಳ ರಕ್ಷಣೆ ಹಾಗೂ ಪೋಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದರು. ನಗರಸಭಾ ಸದಸ್ಯೆ ರಶ್ಮಿ ಭಟ್, ಅಂಗನವಾಡಿ ಕಾರ್ಯಕರ್ತೆಯರು, ಶಿಶು ಅಭಿವೃದ್ಧಿ ಯೋಜನಾ ಕಛೇರಿ ಹಾಗೂ ಬಾಲ ಭವನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿದರು. ಬಾಲಭವನದ ಸಂಯೋಜಕಿ ರಮ್ಯಾ ವಂದಿಸಿದರು. ಮೇಲ್ವಿ ಚಾರಕಿ ಸಂಗೀತಾ ಎಂ.ಕೆ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News