ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಓರ್ವ ಪೊಲೀಸ್ ಸೇರಿ 7 ನಕಲಿ ಅಭ್ಯರ್ಥಿಗಳ ಬಂಧನ

Update: 2020-11-22 15:54 GMT

ಬೆಂಗಳೂರು, ನ.22: ರಾಜ್ಯದ ವಿವಿಧೆಡೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ರವಿವಾರ ನಡೆದ ಪ್ರವೇಶಾತಿ ಪರೀಕ್ಷೆಯಲ್ಲಿ ಕೆಲವೆಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದ್ದು, ತಪಾಸಣೆ ವೇಳೆ 7 ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್ ಠಾಣೆಯ ಕಾನ್‍ಸ್ಟೇಬಲ್, ಪಶ್ಚಿಮ ವಿಭಾಗದಲ್ಲಿ ಇಬ್ಬರು, ದಕ್ಷಿಣ ವಿಭಾಗದಲ್ಲಿ ಒಬ್ಬರು, ಪೂರ್ವ ವಿಭಾಗದಲ್ಲಿ ಮೂವರು ಸೇರಿದಂತೆ ಒಟ್ಟು 7 ಮಂದಿ ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ರಾಜ್ಯದಲ್ಲಿ 17,940 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗಿರುವುದು ತಪಾಸಣೆಯ ವೇಳೆ ಬೆಳಕಿಗೆ ಬಂದಿದೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News