ದ.ಕ. ಜಿಲ್ಲೆಯಲ್ಲಿ ರವಿವಾರ 46 ಮಂದಿಗೆ ಕೊರೋನ ಪಾಸಿಟಿವ್

Update: 2020-11-22 15:29 GMT

ಮಂಗಳೂರು, ನ.22: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿ ಕೊರೋನ ಸೋಂಕು ತಗುಲಿದ್ದು, 51 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ರವಿವಾರ ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿನ 31,566 ಸೋಂಕಿತರ ಪೈಕಿ 30,285 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್‌ಗೆ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 577 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 13,865 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 15,00,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News