ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Update: 2020-11-22 15:44 GMT

ಬೆಂಗಳೂರು, ನ.22: ಐ-ಮಾನಿಟರಿ ಅಡ್ವೈಸರಿ (ಐಎಂಎ) ಕಂಪೆನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.

ರವಿವಾರ ಬೆಳಗ್ಗೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದ ಸಿಬಿಐ ಅಧಿಕಾರಿಗಳು ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸಿತು. ಆ ಬಳಿಕ ಸಂಜೆ ಬಂಧಿಸಿದ್ದು, ಸಿಬಿಐ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ. 

ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಹಾಗೂ ಐಷಾರಾಮಿ ಕಾರು ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಮಾಜಿ ಸಚಿವ ಆರ್.ರೋಷನ್ ಬೇಗ್ ಅವರಿಗೆ ಉಡುಗೊರೆ ನೀಡಿದ್ದಾಗಿ ಆರೋಪ ಮಾಡಿದ್ದರು.

ಶಿವಾಜಿನಗರದ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಆರ್. ರೋಷನ್ ಬೇಗ್ ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News