ಮರಾಠರು ನಮ್ಮ ಅಣ್ಣ-ತಮ್ಮಂದಿರು: ಡಿಸಿಎಂ ಗೋವಿಂದ ಕಾರಜೋಳ

Update: 2020-11-22 16:47 GMT

ವಿಜಯಪುರ, ನ.22: ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರಾಗಿದ್ದು, ಮರಾಠರು ನಮ್ಮ ಅಣ್ಣ-ತಮ್ಮಂದಿರು ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.

ರವಿವಾ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಮರಾಠಾ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆಯೇ ಹೊರತು ಮರಾಠಿ ಅಭಿವೃದ್ಧಿ ನಿಗಮವಲ್ಲ. ಮರಾಠರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಇತಿಹಾಸ ಗೊತ್ತಿಲ್ಲದವರು ಏನೇನೋ ಹೇಳುತ್ತಾರೆ ಎಂದರೆ ಅದಕ್ಕೆ ಕಿವಿಗೊಡುವುದು ಬೇಡ ಎಂದರು.

ರಾಜ್ಯದಲ್ಲಿ ಅತೀವೃಷ್ಟಿ, ಅನಾವೃಷ್ಟಿಯಿಂದ ಆದ ಹಾನಿಗೆ ಕೇಂದ್ರ ಸರಕಾರ ರಾಜ್ಯಕ್ಕೆ ಈ ವರ್ಷ 577 ಕೋಟಿ ರೂ. ಪರಿಹಾರ ಧನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News