ಬಿಜೆಪಿಗೆ ಸೇರುತ್ತೇನೆಂದರೆ ತಾಲೂಕುಗಳನ್ನು ಜಿಲ್ಲೆ ಮಾಡುತ್ತಾರೆ: ಮಾಜಿ ಸಚಿವ ಶಿವರಾಜ ತಂಗಡಗಿ

Update: 2020-11-22 17:55 GMT

ಕೊಪ್ಪಳ, ನ.22: ವಿಜಯನಗರ ಜಿಲ್ಲೆಗೆ ತಾತ್ವಿಕ ಒಪ್ಪಿಗೆ ನೀಡುವ ಅಗತ್ಯವಿರಲಿಲ್ಲ. ಆನಂದ್ ಸಿಂಗ್ ಸಂತೋಷಕ್ಕಾಗಿ ಬಳ್ಳಾರಿ ಇಬ್ಭಾಗ ಮಾಡುವ ಹುನ್ನಾರವಿದು. ಬಿಜೆಪಿಯವರು ಬೇರೆ ಪಕ್ಷದವರು ತಮ್ಮ ಪಕ್ಷಕ್ಕೆ ಸೇರುವುದಾದರೆ ತಾಲೂಕುಗಳನ್ನೇ ಜಿಲ್ಲೆಯನ್ನಾಗಿ ಮಾಡುತ್ತಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದ್ದಾರೆ.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಾಯಕರನ್ನು ಹುಟ್ಟು ಹಾಕುವ, ಬೆಳೆಸುವ ಸಾಮರ್ಥ್ಯವಿಲ್ಲ. ಅದು ಕೇವಲ ಕಾಂಗ್ರೆಸ್‍ಗೆ ಮಾತ್ರ ಇರುವುದು. ಬಿಜೆಪಿ ವಲಸೆ ಹೋದವರನ್ನೇ ಮಂತ್ರಿಗಳನ್ನಾಗಿ ಮಾಡಿದೆ. ಮೂಲ ಬಿಜೆಪಿಯವರು ಎಷ್ಟು ಜನ ಮಂತ್ರಿಗಳಿದಾರೆ ಲೆಕ್ಕ ಹಾಕಿ ನೋಡೋಣ ಎಂದು ಅವರು ಪ್ರಶ್ನಿಸಿದರು.

ಬೇರೆ ಪಕ್ಷ ಬಿಟ್ಟು ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದವರೆಲ್ಲ ಇವಿಎಂ ಮಷೀನ್ ದೋಷದಿಂದ ಗೆದ್ದಿದ್ದಾರೆ. ಶಿರಾದಲ್ಲಿ ಜಯಚಂದ್ರ ಅವರಿಗೆ ಜನಬೆಂಬಲ ಇತ್ತು. ಆದರೂ ಅಲ್ಲೂ ಬಿಜೆಪಿ ಗೆದ್ದಿದೆ ಅಂದರೆ ಏನರ್ಥ? ದೇಶದಲ್ಲಿ ಮುಂಬರುವ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಬಳಸಿ ಗೆಲ್ಲಲಿ. ಹಾಗೊಂದು ವೇಳೆ ಗೆದ್ದರೆ ಬಿಜೆಪಿಗೆ ನಾವು ಶರಣಾಗತಿ ಆಗುತ್ತೇವೆ. ಮುಂಬರುವ ಮಸ್ಕಿ ಚುನಾವಣೆಯಲ್ಲೂ ಇವಿಎಂ ಬಳಸಿದರೆ ನಮಗೆ ಫಲಿತಾಂಶದ ಬಗ್ಗೆ ಅನುಮಾನ ಇರುತ್ತೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News