​ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ

Update: 2020-11-23 04:41 GMT

ಬೆಂಗಳೂರು, ನ.23: ಐಎಂಎ ಕಂಪೆನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ರವಿವಾರ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ.

ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ಇಂದು ಬೆಳಗ್ಗೆ ಪುಲಿಕೇಶಿ ನಗರದ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಿ ಮಾಡಿದೆ. ಸಿಬಿಐ 7 ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
 
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣ ಹಾಗೂ ಐಷಾರಾಮಿ ಕಾರುಗಳನ್ನು ರೋಷನ್ ಬೇಗ್ ಉಡುಗೊರೆಯಾಗಿ ಪಡೆದಿದ್ದಾರೆ ಎಂಬ ಗುರುತರ ಆರೋಪ ಎದುರಿಸುತ್ತಿದ್ದಾರೆ.

ರವಿವಾರ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದ ಸಿಬಿಐ ಅಧಿಕಾರಿಗಳು ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದರು. ಆ ಬಳಿಕ ಸಂಜೆ ಬಂಧಿಸಿ, ಸಿಬಿಐ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News