ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಅಶ್ವತ್ಥ ನಾರಾಯಣ್

Update: 2020-11-23 10:30 GMT

ತುಮಕೂರು, ನ.23: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಅವರು  ಇಂದು ತುಮಕೂರು ಯುನಿವರ್ಸಿಟಿಯ ಪದವಿ ಕಾಲೇಜಿಗೆ ಭೇಟಿ ನೀಡಿದ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ. ಇದು ಕೆಲವು ವಿರೋಧಿಗಳು ಮಾಡುತ್ತಿರುವ ಅಪಪ್ರಚಾರ ಎಂದರು.

 ರಾಜ್ಯ ಸರಕಾರದಲ್ಲಿ ರಮೇಶ್ ಜಾರಕಿಹೊಳಿ ಅವರು 'ಕಿಂಗ್ ಮೇಕರ್' ಆಗಿದ್ದಾರ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ರಮೇಶ್ ಜಾರಕಿಹೊಳಿ ತುಂಬ ಉತ್ಸಾಹಿಗಳಾಗಿದ್ದಾರೆ, ಹಾಗಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಾರೆ. ಕೆಲವರು ಅದನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಕಿಂಗ್ ಮೇಕರ್ ಎಂದೆಲ್ಲ ಹೇಳುತ್ತಿದ್ದಾರೆ. ಅಂತಹ ಸನ್ನಿವೇಶ ಏನು ಇಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News