ಕಾಜಾಗುತ್ತು ಸರಕಾರಿ ಕನ್ನಡ, ಆಂಗ್ಲ ಮಾಧ್ಯಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

Update: 2020-11-23 11:45 GMT

ಹಿರಿಯಡ್ಕ, ನ.23: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ ವನ್ನು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಇತ್ತೀಚೆಗೆ ನೆರವೇರಿಸಿದರು.

ಸಂಪರ್ಕ ಅಂತಾರಾಷ್ಟ್ರೀಯ ಭಾಷೆಯಾಗಿ ಇಂಗ್ಲಿಷ್ ಭಾಷಾ ಕಲಿಕೆ ಇಂದು ಅನಿವಾರ್ಯವಾಗಿದೆ. ಹಾಗಾಗಿ ಇದನ್ನು ನಗಣ್ಯ ಮಾಡುವುದಿಲ್ಲ. ಜಗದ ಪರಿವರ್ತನೆಯೊಂದಿಗೆ ಆಂಗ್ಲ ಮಾಧ್ಯಮಕ್ಕೂ ಒತ್ತು ನೀಡಲಾಗುತ್ತಿದೆ. ಇದು ವ್ಯಾಮೋಹವಲ್ಲ. ಇಂಗ್ಲಿಷ್ ಮಾಧ್ಯಮ ಶಿಕ್ಷಣ ಇಂದು ಅನಿವಾರ್ಯವಾಗಿದೆ ಎಂದು ಲಾಲಾಜಿ ಆರ್.ಮೆಂಡನ್ ಹೇಳಿದರು.

ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ ಕೆ. ಮಾತನಾಡಿ, ಇತ್ತೀಚೆಗಿನ ದಿನಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಬೇಡಿಕೆ ಇರುವುದ ರಿಂದ ಕಳೆದ ವರ್ಷ ಉಡುಪಿ ವಲಯದ ರಾಜೀವ ನಗರ, ಒಳಕಾಡು, ಹಿರಿಯಡಕ ಹಾಗೂ ಪಡುಬಿದ್ರೆ ಶಾಲೆಗಳಿಗೆ ಆಂಗ್ಲ ಮಾಧ್ಯಮದ ಬೋಧ ನೆಗೆ ಅವಕಾಶ ನೀಡಲಾಗಿದೆ. ಪ್ರತೀ ವರ್ಷವೂ ಈ ರೀತಿಯ ಅನುಮೋದನೆಗೆ ಅವಕಾಶ ಸಿಕ್ಕಿದಲ್ಲಿ ಕಾಜಾರಗುತ್ತು ಶಾಲೆಯನ್ನು ಮೊದಲು ಪರಿಗಣಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉದ್ಯಮಿ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ್ ಶೆಟ್ಟಿ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರುಗಳಾದ ಮಲ್ಪೆ ರಾಘವೇಂದ್ರ, ಪಿ.ಮುರ ಳೀಧರ್, ಗೌರಿ ಕೆ., ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಸದಸ್ಯ ಲಕ್ಷ್ಮೀ ನಾರಾಯಣ ಪ್ರಭು, ಶಾಲಾ ಮುಖ್ಯೋಪಾಧ್ಯಾಯ ಸಾಧು, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರುಗಳಾದ ದೇವೇಂದ್ರ ಪ್ರಭು, ಅನಿಲ್ ಶೆಟ್ಟಿ ಮಾಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News