ಯೋಗೀಶ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

Update: 2020-11-23 11:56 GMT

ಧಾರವಾಡ, ನ.23: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಧಾರವಾಡದ 3ನೆ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ವಿನಯ್ ಕುಲಕರ್ಣಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತು.

ಸಿಬಿಐ ಪರ ವಾದಿಸಿದ ವಕೀಲರು, ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡುವಂತೆ ಪೀಠಕ್ಕೆ ಮನವಿ ಮಾಡಿಕೊಂಡರು. ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ಮತ್ತೆ ಎರಡು ವಾರಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತು.

ಸದ್ಯ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿದ್ದು, ಇನ್ನೂ ಎರಡು ವಾರ ಜೈಲಿನಲ್ಲೇ ಕಾಲ ಕಳೆಯಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News