ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಘೋಷಿಸಿದ ರಾಜ್ಯ ಸರಕಾರ

Update: 2020-11-23 12:32 GMT

ಬೆಂಗಳೂರು, ನ. 23: ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ‘ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ಸದರಿ ನಿಗಮಕ್ಕೆ 500 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದೆ.

ಸೋಮವಾರ ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅದೀನ ಕಾರ್ಯದರ್ಶಿ ಪಿ.ಕೆ.ಶ್ರೀಪತಿ ಅವರು ಆದೇಶ ಹೊರಡಿಸಿದ್ದು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಕಂಪನಿ ಕಾಯ್ದೆ 2013ರ ಸೆಕ್ಷನ್ 7ರ ಅನ್ವಯ ನೋಂದಾಯಿಸಿ ಸ್ಥಾಪಿಸುವುದು. ಸದರಿ ನಿಗಮ ಸ್ಥಾಪನೆಗೆ ಅಗತ್ಯ ಅನುಮೋದನೆ ಪಡೆದು ಕೇಂದ್ರ ಸರಕಾರದ ನೋಂದಾಯಿಸುವ ಕಾರ್ಯ ವಹಿಸಲು ಹಾಗೂ ಸದರಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ಭರ್ತಿ ಮಾಡುವವರೆಗೆ ಸದರಿ ನಿಗಮದ ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ನಿಗಮ ಸ್ಥಾಪನೆಗೆ ತಗಲುವ ಪ್ರಾರಂಭಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸಿ ನಂತರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಭರಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News