'ನಿವಾರ್' ಚಂಡಮಾರುತ ಭೀತಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Update: 2020-11-23 14:44 GMT

ಬೆಂಗಳೂರು, ನ.23: ಬಂಗಾಳ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.25 ಹಾಗೂ 26ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಜಂಟಿ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ತಮಿಳುನಾಡಿನ ಕೆಲ ಭಾಗಗಳಲ್ಲಿ ನಿವಾರ್ ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ. ಇದರ ಪ್ರಭಾವ ಕರ್ನಾಟಕಕ್ಕೂ ತಟ್ಟಲಿದ್ದು, ಬೆಂಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ನ.26 ಮತ್ತು 27ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News