ಉಡುಪಿ : 11 ಮಂದಿಗೆ ಕೊರೋನ ಪಾಸಿಟಿವ್

Update: 2020-11-23 15:18 GMT

ಉಡುಪಿ, ನ.23: ಜಿಲ್ಲೆಯಲ್ಲಿ ಸೋಮವಾರ 11 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ 28 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, ಸದ್ಯ ಜಿಲ್ಲೆಯಲ್ಲಿ 181 ಮಂದಿ ಕೊರೋನ ಪಾಸಿಟಿವ್‌ಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 6 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರು. ಇವರಲ್ಲಿ ನಾಲ್ವರು ಪುರುಷರು ಹಾಗೂ ಮೂವರು ಮಹಿಳೆ ಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 5, ಕುಂದಾಪುರ ತಾಲೂಕಿನ 4, ಕಾರ್ಕಳ ತಾಲೂಕಿನ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

28 ಮಂದಿ ಗುಣಮುಖ: ರವಿವಾರ 28 ಮಂದಿ ಚಿಕಿತ್ಸೆ ಬಳಿಕ ಸೋಂಕಿ ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,155 ಆಗಿದೆ. ಜಿಲ್ಲೆಯಲ್ಲಿ ಸದ್ಯ 181 ಮಂದಿ ಈಗಲೂ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2436 ನೆಗೆಟಿವ್: ಜಿಲ್ಲೆಯಲ್ಲಿ ರವಿವಾರ ಒಟ್ಟು 2457 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2436 ಮಂದಿ ನೆಗೆಟಿವ್ ಬಂದಿದ್ದಾರೆ. ಉಳಿದಂತೆ 11(ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,523 ಕ್ಕೇರಿದೆ.

ನಿನ್ನೆಯವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 2,28,461ಕ್ಕೇರಿದೆ. ಇವರಲ್ಲಿ 2,05,938 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಈವರೆಗೆ ಒಟ್ಟು 22,523 ಮಂದಿ ಪಾಸಿಟಿವ್ ಬಂದಿದ್ದರೆ, 22,155 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ನ.7ರಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ಇನ್ನೂ 11 ವಿದ್ಯಾರ್ಥಿಗಳು ಪಾಸಿಟಿವ್

ಜಿಲ್ಲೆಯಲ್ಲಿ ಇನ್ನೂ 11 ಮಂದಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಒಬ್ಬ ಪ್ರಾಧ್ಯಾಪಕರು ಕಡ್ಡಾಯವಾಗಿರುವ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.

ಕಳೆದ ಶುಕ್ರವಾರ ಹಾಗೂ ಶನಿವಾರ ಒಟ್ಟು 11 ಮಂದಿ ವಿದ್ಯಾರ್ಥಿಗಳು ಕೊರೋನಕ್ಕೆ ಪಾಸಿಟಿವ್ ಬಂದಿದ್ದರು. ಇಂದಿನ 11 ಮಂದಿ ಸೇರಿ ಒಟ್ಟು 22 ಮಂದಿ ವಿದ್ಯಾರ್ಥಿಗಳು ಹಾಗೂ ಒಬ್ಬ ಪ್ರಾಧ್ಯಾಪಕರು ಪಾಸಿಟಿವ್ ಬಂದಂತಾಗಿದೆ. ಈಗಾಗಲೇ 6000 ಮಂದಿ ವಿದ್ಯಾರ್ಥಿಗಳ ಕೊರೋನ ಟೆಸ್ಟ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ತೆರೆಯಲು ಕಾಲೇಜುಗಳಿಗೆ ಅನುಮಿತಿ ನೀಡಿದ್ದು, ಆದರೆ ತರಗತಿಗಳಿಗೆ ಹಾಜರಾಗುವ ಮುನ್ನ ಪ್ರತಿಯೊಬ್ಬ ವಿದ್ಯಾರ್ಥಿ, ಪ್ರಾಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿಗಳು ಕೋವಿಡ್‌ಗೆ ನೆಗೆಟಿವ್ ವರದಿ ಪಡೆದಿರುವು ದನ್ನು ಕಡ್ಡಾಯಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News