ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪರೋಲ್ ಅವಧಿ ವಿಸ್ತರಿಸಿದ ಸುಪ್ರೀಂ ಕೋರ್ಟ್

Update: 2020-11-23 15:59 GMT

ಹೊಸದಿಲ್ಲಿ, ನ. 23: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಎ.ಜಿ. ಪೇರರಿ ವಾಲನ್‌ಗೆ ವೈದ್ಯಕೀಯ ತಪಾಸಣೆಗೆ ನೀಡಲಾಗಿದ್ದ ಪರೋಲ್ ಅನ್ನು ಸುಪ್ರೀಂ ಕೋರ್ಟ್ ಸೋಮವಾರ 1 ವಾರಗಳ ಕಾಲ ವಿಸ್ತರಿಸಿದೆ.

ಪೇರರಿವಾಲನ್ ಆಸ್ಪತ್ರೆಗೆ ಭೇಟಿ ನೀಡುವ ಸಂದರ್ಭ ಆತನಿಗೆ ರಕ್ಷಣೆ ನೀಡುವಂತೆ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಹೇಮಂತ್ ಗುಪ್ತಾ, ಅಜಯ್ ರಸ್ತೋಗಿ ಅವರನ್ನು ಒಳಗೊಂಡ ಪೀಠ ತಮಿಳುನಾಡು ಸರಕಾರಕ್ಕೆ ನಿರ್ದೇಶಿಸಿದೆ.

ಮದ್ರಾಸ್ ಉಚ್ಚ ನ್ಯಾಯಾಲಯ ಪೇರರಿವಾಲನ್‌ಗೆ ನೀಡಿದ ಪರೋಲ್ ನವೆಂಬರ್ 23ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪರೋಲ್ ಅನ್ನು 1 ವಾರಗಳ ಅವಧಿಗೆ ವಿಸ್ತರಿಸಿತು.

1991ರಲ್ಲಿ ನಡೆದ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಪೇರರಿವಾಲನ್ ಸೇರಿದಂತೆ ಎಲ್ಲ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ಶಿಫಾರಸು ಮಾಡಿತ್ತು. ಆದರೆ, ಈ ಶಿಫಾರಸು ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಲ್ಲಿ ಇನ್ನೂ ಬಾಕಿ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News