×
Ad

ಫೆ.26ರಿಂದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Update: 2020-11-24 17:03 IST
ಮನು ಬಳಿಗಾರ್

ಬೆಂಗಳೂರು, ನ.24: ಈಗಾಗಲೇ ನಿರ್ಧರಿಸಿದಂತೆ ಹಾವೇರಿಯಲ್ಲಿ ಜರುಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.26, 27 ಹಾಗೂ 28ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ನಗರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಇದಕ್ಕೂ ಮುನ್ನ ಸಮ್ಮೇಳನವನ್ನು ನಡೆಸುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಹಾವೇರಿ ಶಾಸಕ ನೆಹರೂ ಓಲೆಕಾರ್ ಅವರೊಂದಿಗೆ ದಿನಾಂಕ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಾಗಿದೆ ಎಂದರು.

ಕೋವಿಡ್-19 ಪ್ರಸಾರ ಇಳಿಮುಖವಾಗತೊಡಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರವು ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಸಾಹಿತ್ಯ ಸಮ್ಮೇಳನ ನಡೆಸಲು ಅನುವು ಮಾಡಿಕೊಡಬೇಕೆಂದು ಸರಕಾರಕ್ಕೆ ಮನವಿ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯಕಾರಿ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News