ಹೈನುಗಾರಿಕೆ ತಾಣ, ಗೋಶಾಲೆಗಳ ನೊಂದಣಿಗೆ ಸೂಚನೆ

Update: 2020-11-24 13:37 GMT

ಉಡುಪಿ, ನ.24: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಬೇಕು.

ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಅಥವಾ ಆನ್‌ಲೈನ್ ನೊಂದಣಿ ಮಾಡಿಕೊಳ್ಳುವವರೆಗೆ ಆಪ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

10ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಪಾರ್ಮ್‌ಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂ ಕಾರ್ಯ ನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ ಹಾಗೂ ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ಒಪ್ಪಿಗೆ ಪತ್ರವನ್ನು ಪಡೆಯಬೇಕು.

ಎಲ್ಲಾ ಡೈರಿ ಪಾರ್ಮ್‌ಗಳು ಹಾಗೂ ಗೋಶಾಲೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ನಗರ ಸ್ಥಳೀಯಸಂಸ್ಥೆಗಳು ಅಥವಾ ಮಾಲಿನ್ಯ ನಿಯಂತ್ರಣ ಮಂಡಳಿಯು ಖಚಿತಪಡಿಸಿಕೊಳ್ಳಬೇಕು. ಹೈನುಗಾರಿಕೆ ತಾಣಗಳನ್ನು ಹಾಗೂ ಗೋಶಾಲೆಗಳನ್ನು ನಿರ್ವಹಿಸುತ್ತಿರುವವರು ಒಂದು ವಾರದಲ್ಲಿ ನೊಂದಣಿ ಮಾಡಿಕೊಳ್ಳುವಂತೆ ನಗರಸಭಾ ಪೌರಾ ಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News