ನ.26ರಿಂದ ಅತ್ತೂರಿನಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Update: 2020-11-24 13:43 GMT

ಉಡುಪಿ, ನ.24: ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡೆಯಲ್ಲಿರುವ ದೈವ ಸಾನಿಧ್ಯವನ್ನು ಪುನರ್ನಿರ್ಮಾಣ ನಿಮಿತ್ತ ನ.26ರಿಂದ 28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆಸಲು ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದೆೆ ಎಂದು ವೇದಿಕೆಯ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆ ಹಳ್ಳಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಪಯ್ಯನ್ನೂರಿನ ದೈವಜ್ಞ ನಾರಾಯಣ ಪೊದುವಾಲ್ ಈ ಕಾರ್ಯಕ್ರಮ ವನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಗಣ್ಯರು ಆಗಮಿಸಲಿದ್ದಾರೆ. ಈ ಅಷ್ಟಮಂಗಲ ಪ್ರಶ್ನಾ ಚಿಂತನೆ ಯಲ್ಲಿ ಕಾರ್ಕಳದ ಇತಿಹಾಸಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದ್ದು, ಹೀಗಾಗಿ ಈ ಕಾರ್ಯಕ್ರಮ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಕಳ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ನಾಯಕ್, ಮುಖಂಡರಾದ ಮಹೇಶ್ ಬೈಲೂರು, ದಿನೇಶ್ ಶೆಟ್ಟಿ ಹೆಬ್ರಿ, ಗುರುಪ್ರಸಾದ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News