ಜನಪ್ರತಿನಿಧಿಗಳ ವಿರುದ್ಧದ ಪ್ರಕರಣ ವಿಚಾರಣೆ: ವಿಶೇಷ ಕೋರ್ಟ್ ಸ್ಥಾಪನೆಗೆ ನಿಲುವು ಕೇಳಿದ ಹೈಕೋರ್ಟ್
Update: 2020-11-24 20:01 IST
ಬೆಂಗಳೂರು, ನ.24: ಶಾಸಕರು, ಸಂಸದರು ಸೇರಿ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ಕೋರ್ಟ್ ಸ್ಥಾಪಿಸುವ ಪ್ರಸ್ತಾವದ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿಲುವು ತಿಳಿಸುವಂತೆ ಹೈಕೋರ್ಟ್ ಸರಕಾರಕ್ಕೆ ಸೂಚಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.